ಧಾರವಾಡ: ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ 5 ವರ್ಷದ ಬಾಲಕಿ ಸೇರಿದಂತೆ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ಮೇ 20ರಂದು ನಿಶ್ಚಿತಾರ್ಥ ಮುಗಿಸಿ ವಾಪಸ್ ಆಗುತ್ತಿದ್ದ ವೇಳೆ ಧಾರವಾಡದಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 8 ಜನರು ಸಾವನ್ನಪ್ಪಿದ್ದರು. ಬಳಿಕ ಚಿಕಿತ್ಸೆ ಫಲಿಸದೇ ಓರ್ವ ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೀಗ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ 5 ವರ್ಷದ ಬಾಲಕಿ ಹಾಗೂ 16 ವರ್ಷದ ಬಾಲಕ ಇಬ್ಬರು ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದಲ್ಲಿ ನೆಹರೂ ಪ್ರತಿಮೆ ಭಗ್ನಗೊಳಿಸಿದ ದುಷ್ಕರ್ಮಿಗಳು ಅಂದರ್
ಆರಾಧ್ಯ (5) ಹಾಗೂ ಮುತ್ತು ಮರಿಗೌಡ (16) ಮೃತರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಈ ಇಬ್ಬರು ಮಕ್ಕಳನ್ನು ಹುಬ್ಬಳ್ಳಿ ಕಿಮ್ಸ್ ನಲ್ಲಿ ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಸ್ಪಂದಿಸದೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.