ಚೆನ್ನೈ: ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, 6 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಿನ್ನೆ ತಡರಾತ್ರಿಯಿಂದ ತಮಿಳುನಾಡಿದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಮಳೆ ಹಿನ್ನೆಲೆಯಲ್ಲಿ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ವೆಲ್ಲೂರು, ರಾಣಿಪೇಟ್, ಚೆಂಗಲ್ ಪೇಟ್ ಜಿಲ್ಲೆಗಳಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ತಮಿಳುನಾಡಿನಲ್ಲಿ ಭಾರಿ ಮಳೆಯಿಂದ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಚೆನ್ನೈಗೆ ಆಗಮಿಸುತ್ತಿದ್ದ ಅಂತರಾಷ್ಟ್ರೀಯ ವಿಮಾನದಲ್ಲಿ ವ್ಯತ್ಯವವಾಗಿದೆ. ಚೆನ್ನೈಗೆ ತೆರಳಬೇಕಿದ್ದ ಅಂತರಾಷ್ಟ್ರೀಯ ವಿಮಾನಗಳನ್ನು ಬೆಂಗಳೂರಿಗೆ ತಿರುಗಿಸಲಾಗಿದೆ. ಇನ್ನು ಚೆನ್ನೈನಿಂದ ಹೊರಡಬೇಕಿದ್ದ 12 ಅಂತರಾಷ್ಟ್ರೀಯ ವಿಮಾನಗಳು ವಿಳಂಬವಾಗಿ ಹೊರಡುತ್ತಿವೆ ಎಂದು ತಿಳಿದುಬಂದಿದೆ.