ಬೆಂಗಳೂರು: ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿ ಮುಂದೆ ನಾಯಿಮರಿಯಂತೆ ಇರ್ತಾರೆ ಎಂಬ ತಮ್ಮ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ ವಿರುದ್ಧ ನೀಡಿದ್ದ ಹೇಳಿಕೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾನು ಸದುದ್ದೇಶದಿಂದಲೇ ಹೇಳಿದ್ದೇನೆ. ರಾಜ್ಯದ ಹಿತದೃಷ್ಟಿಯಿಂದ ಸಿಎಂ ಧೈರ್ಯ ತೋರಬೇಕು ಎಂದು ಹೇಳಿದ್ದೇನೆ. ಕೇಂದ್ರ ಸರ್ಕಾರದಿಂದ ಅನುದಾನ ಸರಿಯಾಗಿ ಬಂದಿಲ್ಲ. ಅನುದಾನ ಕಡಿಮೆಯಾಗಿದೆ. ಹಾಗಾಗಿ ಧೈರ್ಯದಿಂದ ಪ್ರಧಾನಿ ಬಳಿ ಮಾತನಾಡಬೇಕು ಎಂಬ ಅರ್ಥದಲ್ಲಿ ಹೇಳಿದ್ದೇನೆ ಹೊರತು ಬೇರೆ ಕಾರಣಕ್ಕಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದೇ ವೇಳೆ ಸಚಿವ ಶ್ರೀರಾಮುಲು ಬಗ್ಗೆ ಗರಂ ಆದ ಸಿದ್ದರಾಮಯ್ಯ ಅವನ್ಯಾವ ಪೆದ್ದ, ಅವನ ಬಗ್ಗೆ ಮಾತನಾಡಲ್ಲ, ಬಿಜೆಪಿ ಅಂದ್ರೇನೆ ಸುಳ್ಳಿನ ಕಾರ್ಖಾನೆ. ಸುಳ್ಳು ಹೇಳೋದೇ ಅವರ ವೃತ್ತಿ. ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್ ಹೀಗೆ ಎಲ್ಲರೂ ಸುಳ್ಳು ಹೇಳೋರೇ ಎಂದು ವಾಗ್ದಾಳಿ ನಡೆಸಿದ್ದಾರೆ.