ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ನೆರವೇರಿಸಲಾಗಿದ್ದು, ಇದಕ್ಕೆ ಎಲ್ಲರಿಂದಲೂ ಸಹಕಾರ ಸಿಕ್ಕಿದೆ. ಹೀಗಾಗಿ ಯಾವುದೇ ಗೊಂದಲಗಳಿಲ್ಲದೆ ಶಾಂತಿಯುತವಾಗಿ ಧ್ವಜಾರೋಹಣ ನೆರವೇರಿದೆ.
ಇದರ ಮಧ್ಯೆ ಈಗ ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಚಾಮರಾಜಪೇಟೆ ಮೈದಾನದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮನವಿ ಬಂದಿದೆ ಎನ್ನಲಾಗಿದ್ದು, ಈ ಕುರಿತು ಕಂದಾಯ ಸಚಿವ ಆರ್. ಅಶೋಕ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತಂತೆ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.