alex Certify BIG NEWS: ಧ್ವಜಾರೋಹಣದ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಧ್ವಜಾರೋಹಣದ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮನವಿ

ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಧ್ವಜಾರೋಹಣ ನೆರವೇರಿಸಲಾಗಿದ್ದು, ಇದಕ್ಕೆ ಎಲ್ಲರಿಂದಲೂ ಸಹಕಾರ ಸಿಕ್ಕಿದೆ. ಹೀಗಾಗಿ ಯಾವುದೇ ಗೊಂದಲಗಳಿಲ್ಲದೆ ಶಾಂತಿಯುತವಾಗಿ ಧ್ವಜಾರೋಹಣ ನೆರವೇರಿದೆ.

ಇದರ ಮಧ್ಯೆ ಈಗ ಗೌರಿ – ಗಣೇಶ ಹಬ್ಬದ ಸಂದರ್ಭದಲ್ಲಿ ಚಾಮರಾಜಪೇಟೆ ಮೈದಾನದಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮನವಿ ಬಂದಿದೆ ಎನ್ನಲಾಗಿದ್ದು, ಈ ಕುರಿತು ಕಂದಾಯ ಸಚಿವ ಆರ್. ಅಶೋಕ್ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿಷ್ಠಾಪನೆ ಕುರಿತಂತೆ ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಮನವಿ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...