alex Certify BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕಲಿ ಕ್ಲಿನಿಕ್ ಗಳ ಮೇಲೆ ದಿಢೀರ್ ದಾಳಿ; 5ಕ್ಕೂ ಹೆಚ್ಚು ಕ್ಲಿನಿಕ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಕೋಲಾರ: ಇತ್ತೀಚಿನ ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ನಕಲಿ ಕ್ಲಿನಿಕ್ ಗಳು ತಲೆ ಎತ್ತಿದ್ದು, ಇಂತಹ ಕ್ಲಿನಿಕ್ ಗಳ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ ಸಾರಿದ್ದಾರೆ. ಕೋಲಾರದ ಹಲವೆಡೆಗಳಲ್ಲಿ ನಕಲಿ ಕ್ಲಿನಿಕ್ ಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಕೋಲಾರದ ಚಿಟ್ನಹಳ್ಳಿ, ಶೆಟ್ಟಿಮಾದಮಂಗಲ, ಮದನಹಳ್ಳಿ ಕ್ರಾಸ್ ಬಳಿಯ ಕ್ಲಿನಿಕ್, ಗೋಕುಲ್ ಕ್ಲಿನಿಕ್, ವೆಂಕಟೇಶ್ವರ ಕ್ಲಿನಿಕ್, ಆನಂದ್ ಕ್ಲಿನಿಕ್ ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿನ ವೈದ್ಯರು, ಸಿಬ್ಬಂದಿಗಳು ಸಂಬಂಧಿಸಿದ ದಾಖಲೆಗಳನ್ನು ತೋರಿಸಿಲ್ಲ. ಈ ಹಿನ್ನೆಲೆಯಲ್ಲಿ ಈ ಎಲ್ಲಾ ಕ್ಲಿನಿಕ್ ಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ.

ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...