alex Certify BIG NEWS: ನಕಲಿ ಗಾಂಧಿ ಹೆಸರಲ್ಲಿ ಪಕ್ಷದ ಆಸ್ತಿಯನ್ನೇ ಕಬಳಿಸಿದ ’ಕುಟುಂಬ’; ತಿಹಾರ್ ಯಾತ್ರೆ ಮುಗಿಸಿದರೂ ಬಾರದ ಬುದ್ಧಿ; ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕಲಿ ಗಾಂಧಿ ಹೆಸರಲ್ಲಿ ಪಕ್ಷದ ಆಸ್ತಿಯನ್ನೇ ಕಬಳಿಸಿದ ’ಕುಟುಂಬ’; ತಿಹಾರ್ ಯಾತ್ರೆ ಮುಗಿಸಿದರೂ ಬಾರದ ಬುದ್ಧಿ; ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಟ್ವೀಟಾಸ್ತ್ರ

ಬೆಂಗಳೂರು: ಭ್ರಷ್ಟಾಚಾರದಲ್ಲಿ ವಿಶೇಷ ಸಾಧನೆ ಮಾಡಿ ಜಾಮೀನಿನ ಮೇಲೆ ಹೊರಗಿರುವ ಕಾಂಗ್ರೆಸ್ ಪಕ್ಷದ ವಿಶೇಷ ಸಾಧಕರು ಎಂದು ರಾಜ್ಯ ಬಿಜೆಪಿ ಘಟಕ ಪಟ್ಟಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಸರಣಿ ಟ್ವೀಟ್ ಮೂಲಕ ಕಿಡಿಕಾರಿರುವ ಬಿಜೆಪಿ, ಭ್ರಷ್ಟಾಚಾರದಲ್ಲಿ ವಿಶೇಷ ಸಾಧನೆ ಮಾಡಿದ ಕಾಂಗ್ರೆಸ್ ನಾಯಕರು ಇವರು- ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಿ.ಚಿದಂಬರಂ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್ ಎಷ್ಟೊಂದು ಭ್ರಷ್ಟರು..ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ತವರುಮನೆ ಎಂದು ವಾಗ್ದಾಳಿ ನಡೆಸಿದೆ.

ಬಿಪಿಎಲ್, ಅಂತ್ಯೋದಯ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ರೇಷನ್

ಭ್ರಷ್ಟಾತಿ ಭ್ರಷ್ಟ ಎಂಎಂಕೆ! ಹಲವು ದಶಕಗಳಿಂದ ಕಲ್ಯಾಣ ಕರ್ನಾಟಕವನ್ನು ಲೂಟಿ ಮಾಡಿದ ಭ್ರಷ್ಟ ಕಾಂಗ್ರೆಸ್ಸಿಗನ ಸಂಕ್ಷಿಪ್ತ ಹೆಸರಿದು. ಮಲ್ಲಿಕಾರ್ಜುನ ಖರ್ಗೆ ಅವರ ಸಂಪತ್ತಿನ ಲೆಕ್ಕವನ್ನು ಜನರ ಮುಂದಿಡಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವೇ? ಖರ್ಗೆ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ ಎಂದು ಟೀಕಿಸಿದೆ.

ಕುಟುಂಬದ ಹೆಸರಲ್ಲಿ ದೇಶವನ್ನು ಕೊಳ್ಳೆ ಹೊಡೆದ ನಕಲಿ ಗಾಂಧಿ ಕುಟುಂಬದ ಆಸ್ತಿ ಎಷ್ಟೆಂದು ಯಾರಿಗಾದರೂ ಗೊತ್ತೇ? ಅದರಲ್ಲಿ ಬೇನಾಮಿ ಎಷ್ಟೆಂದು ಲೆಕ್ಕ ಹಾಕಿ ಹೇಳಲು ಸಾಧ್ಯವೇ? ಕಾಂಗ್ರೆಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಸೋನಿಯಾ ಗಾಂಧಿ ಪಾಲೆಷ್ಟು? ಕಾಂಗ್ರೆಸ್ ಭ್ರಷ್ಟಾಚಾರ ಎಲ್ಲಿಯವರೆಗೆ ತಲುಪಿತ್ತು ಎಂದರೆ ಸ್ವತಃ ಪಕ್ಷದ ಆಸ್ತಿಯನ್ನೇ ನಕಲಿ ಗಾಂಧಿ ಕುಟುಂಬ ಕಬಳಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ತಿಹಾರ್ ಯಾತ್ರೆ ಮಾಡುವ ಎಲ್ಲಾ ಲಕ್ಷಣಗಳಿವೆ ಎಂದು ವಾಗ್ದಾಳಿ ನಡೆಸಿದೆ.

ವರ್ಕ್‌ಔಟ್ ವೇಳೆ 80ರ ದಶಕದ ಹಾಡಿಗೆ ಹೆಜ್ಜೆ ಹಾಕಿದ ಹೃತಿಕ್

ಇದೇ ವೇಳೆ ಡಿ.ಕೆ.ಶಿವಕುಮಾರ್ ವಿರುದ್ಧವೂ ಕಿಡಿಕಾರಿರುವ ಬಿಜೆಪಿ, ಭ್ರಷ್ಟಾಧ್ಯಕ್ಷ ಎಂದೇ ಕುಖ್ಯಾತಿ ಪಡೆದಿರುವ ಕೆಪಿಸಿಸಿ ರಾಜ್ಯಾಧ್ಯಕ್ಷರು, ಅಕ್ರಮ ಸಂಪಾದನೆ ಹಾಗೂ ಅಕ್ರಮ ಹಣ ವರ್ಗಾವಣೆಯ ಪ್ರಕರಣದಲ್ಲಿ ತಿಹಾರ್ ಯಾತ್ರೆ ಮುಗಿಸಿ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪಕ್ಷದ ಕಚೇರಿಗೆ ಭೇಟಿ ನೀಡುವುದಕ್ಕಿಂತ ಕೋರ್ಟ್ ಗೆ ಹೆಚ್ಚು ಅಲೆದಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...