
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಚೇತನ್ ನನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಚೇತನ್ ನನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ನಟ ಚೇತನ್ ವಿರುದ್ಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.