ಬೆಂಗಳೂರು; ನ್ಯಾಯಾಂಗ ಬಂಧನದಲ್ಲಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ನೀಡಿದೆ.
ಜಡ್ಜ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ನಟ ಚೇತನ್ ಅವರಿಗೆ ಫೆ.23ರಂದು 8ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.
ನಟ ಚೇತನ್ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ 32ನೇ ಎಸಿಎಂಎಂ ನ್ಯಾಯಾಲಯ ಚೇತನ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.