ಧಾರವಾಡ: ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿಕೆ ನೀಡಿದ್ದ ನಟ ಚೇತನ್ ವಿರುದ್ಧ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.
ನಟ ಚೇತನ್ ವಿರುದ್ಧ ನಿನ್ನೆ ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಇದೀಗ ಧಾರವಾಡದಲ್ಲಿಯೂ ದೂರು ದಾಖಲಾಗಿದೆ.
ಧಾರವಾಡ ಉಪನಗರ ಠಾಣೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ನಟ ಚೇತನ್ ವಿರುದ್ಧ ದೂರು ದಾಖಲಿಸಿದ್ದರು. ನಟ ಚೇತನ್ ಭಾರತದ ಪ್ರಜೆಯೇ ಅಲ್ಲ. ಇಲ್ಲಿ ಬಂದು ಹಿಂದೂ ಧರ್ಮ ಒಡೆಯಲು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಬೇಕು ಎಂದು ಹಿಂದೂ ಸಂಘಟನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.