ಬೆಂಗಳೂರು: ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರಿಗೆ ಕಾಲಿನ ಪಾದದ ಮೂಳೆ ಮುರಿದಿದ್ದು, ಈ ಬಗ್ಗೆ ಸ್ವತಃ ಜಗ್ಗೇಶ್ ಮಾಹಿತಿ ನೀಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಅಮೆರಿಕಾಗೆ ತೆರಳಿ ಬೆಂಗಳೂರಿಗೆ ವಾಪಸ್ ಆಗಿದ್ದ ನಟ ಜಗ್ಗೇಶ್ ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಡಿಸಿಎಂ ಆಗಿದ್ದಕ್ಕೆ ಶುಭ ಹಾರೈಸಿದ್ದರು. ಈಗ ಕಾಲಿನ ಮೂಳೆ ಮುರಿದಿರುವ ಬಗ್ಗೆ ಸಾಮಾಜಿಕ ಜಾಲತಾಣಳಲ್ಲಿ ಫೋಟೋ ಹಂಚಿಕೊಂಡು ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಕಾಲಿಗೆ ಪ್ಲಾಸ್ಟರ್ ಬ್ಯಾಂಡೇಜ್ ಹಾಕಲಾಗಿರುವ ಚಿತ್ರವನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ನಟ ಜಗ್ಗೇಶ್, ಸಣ್ಣ ಅಚಾತುರ್ಯ ನಡಿಗೆಯಿಂದಾಗಿ ಪಾದದ ಮೂಳೆ ಮುರಿದಿದ್ದು, 6 ವಾರಗಳ ಕಾಲ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.