ಬೆಂಗಳೂರು: ಪವರ್ ಸ್ಟಾರ್ ದಿ. ಪುನೀತ್ ರಾಜ್ ಕುಮಾರ್ ಅವರ ಜೀವನ ಸಾಧನೆ ಪಠ್ಯ ಪುಸ್ತಕದಲ್ಲಿ ಸೇರಿಸುವ ವಿಚಾರವಾಗಿ ಕಂದಾಯ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಲವರ ಜೀವನ ಸಾಧನೆ ಸೇರಿಸಬೇಕು ಎಂದಾಗ ವಿಘ್ನಗಳು ಎದುರಾಗುತ್ತವೆ. ಆದರೆ ಪುನೀತ್ ಅಂತವರಿಗೆ ಆ ರೀತಿ ಅಡ್ಡಿಯಾಗಲ್ಲ. ಹೀಗಾಗಿ ಪುನೀತ್ ಜೀವನ ಸಾಧನೆ ಪಠ್ಯದಲ್ಲಿ ಸೇರಿಸಬೇಕು ಎಂದರು.
ಈ ಬಗ್ಗೆ ಸಿಎಂ ಹಾಗೂ ಶಿಕ್ಷಣ ಸಚಿವರು ನಿರ್ಧಾರ ಕೈಗೊಳ್ಳುತ್ತಾರೆ. ಮುಂದಿನ ವರ್ಷ ಪರಿಶೀಲನೆ ನಡೆಸಿ ಪಠ್ಯ ಪುಸ್ತಕದಲ್ಲಿ ಸೇರಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.