ಬೆಳಗಾವಿ: ಸ್ಯಾಂಡಲ್ ವುಡ್ ನಟ ರಮೇಶ್ ಅರವಿಂದ್ ಸೇರಿದಂತೆ ಮೂವರು ಸಾಧಕರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ನಟ ರಮೇಶ್ ಅರವಿಂದ್, ಸಮಾಜ ಸೇವಕ ರವಿಚಂದರ್ ವೆಂಕಟರಾಮನ್ ಹಾಗೂ ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದ ಕೊಡುಗೆಗಾಗಿ ಅಕ್ಕ ಅನ್ನಪೂರ್ಣ ತಾಯಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಈ ವೇಳೆ ವಿಶ್ವವಿದ್ಯಾಲಯದ ವಿವಿಧ ವಿಷಯವಾರು ಅಧ್ಯಯನ ಕೈಗೊಂಡಿರುವ 48 ಸಂಶೋಧನಾ ವಿದ್ಯಾರ್ಥಿಗಳಿಗೆ ಪಿ ಹೆಚ್ ಡಿ ಪದವಿಗಳನ್ನು ಪ್ರದಾನ ಮಾಡಲಾಯಿತು. 11 ವಿದ್ಯಾರ್ಥಿಗಳಿಗೆ ಸ್ವರ್ಣ ಪದಕ ನೀಡಲಾಯಿತು.