ಹುಬ್ಬಳ್ಳಿ; ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಟೀಕಿಸಿದ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ನಟರು ಯಾವ ಪಕ್ಷದ ಪರವಾಗಿ ಬೇಕಾದರೂ ಪ್ರಚಾರ ಮಾಡಬಹುದು. ಶಿವರಾಜ್ ಕುಮಾರ್ ಪ್ರಚಾರ ಮಾಡಿದರೆ ನಮಗೇನು ಅಭ್ಯಂತರವಿಲ್ಲ. ಕಾಂಗ್ರೆಸ್ ಪರ ಪ್ರಚಾರಕ್ಕೆ ಸೋನಿಯಾ ಗಾಂಧಿ ಸಹ ಬರುತ್ತಿದ್ದಾರೆ. ಇಂದು ಬಿಜೆಪಿ ಪರ ಪ್ರಚಾರಕ್ಕೆ ಹಾವೇರಿಗೆ ಪ್ರಧಾನಿ ಮೋದಿ ಸಹ ಬರುತ್ತಿದ್ದಾರೆ ಎಂದರು.
ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ನಟ ಶಿವರಾಜ್ ಕುಮಾರ್ ತೆರಳಿದ್ದಕ್ಕೆ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ ಶಿವರಾಜ್ ಕುಮಾರ್ ಇಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ.