alex Certify BIG NEWS: ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಓಲಾ S1 pro ಎಲೆಕ್ಟ್ರಿಕ್‌ ಸ್ಕೂಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಓಲಾ S1 pro ಎಲೆಕ್ಟ್ರಿಕ್‌ ಸ್ಕೂಟರ್

ದೇಶದಲ್ಲಿ ಎಲೆಕ್ಟ್ರಿಕ್‌ ಸ್ಕೂಟರ್‌ ಗಳಿಗೆ ಡಿಮ್ಯಾಂಡ್‌ ಹೆಚ್ಚಿದೆ. ಮುಗಿಲು ಮುಟ್ಟುತ್ತಿರುವ ಪೆಟ್ರೋಲ್‌ ಮತ್ತು ಡಿಸೇಲ್‌ ದರಗಳ ಹಿನ್ನಲೆಯಲ್ಲಿ ವಾಹನ ಖರೀದಿಸುವವರು ಎಲೆಕ್ಟ್ರಿಕ್‌ ವಾಹನಗಳತ್ತ ಮುಖ ಮಾಡುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಬಹಳಷ್ಟು ನೂತನ ಕಂಪನಿಗಳು ಎಲೆಕ್ಟ್ರಿಕ್‌ ವಾಹನಗಳ ತಯಾರಿಕೆಗೆ ಮುಂದಾಗಿದ್ದು, ಇವುಗಳ ಪೈಕಿ ಓಲಾ ಕೂಡಾ ಒಂದು. ಓಲಾ ಸ್ಕೂಟರ್‌ ಗಳು ಮಾರುಕಟ್ಟೆಗೆ ಬಂದಿದ್ದು, ಇವುಗಳನ್ನು ಖರೀದಿಸಲು ಗ್ರಾಹಕರು ಮುಗಿಬಿದ್ದಿದ್ದರು.

ಇದರ ಮಧ್ಯೆ ಮಹಾರಾಷ್ಟ್ರದ ಪುಣೆಯಲ್ಲಿ ಓಲಾ S1 pro ಎಲೆಕ್ಟ್ರಿಕ್‌ ಸ್ಕೂಟರ್ ಧಗಧಗನೆ ಹೊತ್ತಿ ಉರಿದಿದ್ದು, ವಾಹನ ಮಾಲೀಕ ಕಂಗಾಲಾಗಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆಯೇ ಓಲಾ ಕಂಪನಿ ಈ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...