alex Certify BIG NEWS: ನನಗೂ ಸಾಕಷ್ಟು ಅಭಿಮಾನಿಗಳಿದ್ದಾರೆ; ನಾನೂ ಸಿಎಂ ಆಗಲು ಯೋಗ್ಯ ಎನ್ನುತ್ತಿದ್ದಾರೆ; ಪರೋಕ್ಷವಾಗಿ ತಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಎಸ್.ಆರ್. ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನಗೂ ಸಾಕಷ್ಟು ಅಭಿಮಾನಿಗಳಿದ್ದಾರೆ; ನಾನೂ ಸಿಎಂ ಆಗಲು ಯೋಗ್ಯ ಎನ್ನುತ್ತಿದ್ದಾರೆ; ಪರೋಕ್ಷವಾಗಿ ತಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಎಸ್.ಆರ್. ಪಾಟೀಲ್

ಕೊಪ್ಪಳ: ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ನಮ್ಮಲ್ಲಿ ಬಹಳ ಜನ ಸಿಎಂ ಸ್ಥಾನದ ಆಕಾಂಕ್ಷಿಗಳಿದ್ದಾರೆ ನನಗೂ ಅಭಿಮಾನಿಗಳಿದ್ದಾರೆ ಎಂದು ಹೇಳುವ ಮೂಲಕ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್ ತಾನೂ ಕೂಡ ಸಿಎಂ ಸ್ಥಾನದ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಸೂಚಿಸಿದ್ದಾರೆ.

ಈ ರಾಜ್ಯಗಳಲ್ಲಿ ಮುಂದಿನ ವಾರ ನಾಲ್ಕು ದಿನ ʼಬಂದ್ʼ ಇರಲಿದೆ ಬ್ಯಾಂಕ್

ಕೊಪ್ಪಳದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಈಗಲೇ ಸಿಎಂ ಅಭ್ಯರ್ಥಿ ಚರ್ಚೆ ಸರಿಯಲ್ಲ. ಮೊದಲು ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬೇಕು. ಸಿಎಲ್ಪಿ ಸಭೆಯಲ್ಲಿ ನಾಯಕನ ಆಯ್ಕೆ ಅಂತಿಮವಾಗುತ್ತೆ. ಸಿದ್ದರಾಮಯ್ಯ 5 ವರ್ಷ ಉತ್ತಮ ಆಡಳಿತ ನಡೆಸಿದ್ದಾರೆ. ಕಾಂಗ್ರೆಸ್ ನಲ್ಲಿ ಅರ್ಧ ಡಜನ್ ಸಿಎಂ ಅಭ್ಯರ್ಥಿಗಳಿದ್ದಾರೆ ಎಂದು ಹೇಳಿದರು.

ಮದುವೆಯಾದ ಮರುದಿನವೇ ಗಂಡನ ಕಪಾಳಕ್ಕೆ ಹೊಡೆದ ಮಹಿಳೆ….!

ನನಗೂ ಸಾಕಷ್ಟು ಜನ ಅಭಿಮಾನಿಗಳಿದ್ದಾರೆ. ನಾನು ಸಿಎಂ ಆಗಲು ಯೋಗ್ಯ ಎಂದು ಹೇಳುತ್ತಾರೆ. ಮೊದಲು ನಾವು ಬಿಜೆಪಿ ಸರ್ಕಾರ ಕಿತ್ತೊಗೆಯಬೇಕಿದೆ. ಈಗಲೇ ಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆಸುವುದು ಸರಿಯಲ್ಲ. ಕಾಂಗ್ರೆಸ್ ನಲ್ಲಿ ನಾಯಕರ ಕೊರತೆಯಿಲ್ಲ. ಆದರೆ ಬಿಜೆಪಿಯಲ್ಲಿ ಬಿಎಸ್ ವೈ ಅಧಿಕಾರದಿಂದ ಕೆಳಗಿಳಿದ ಬಳಿಕ ಪಕ್ಷಕ್ಕೆ ದಿಕ್ಕು ದೆಸೆ ಇರಲ್ಲ. ಈಗಿರುವ ಬಿಜೆಪಿ ದಪ್ಪ ಚರ್ಮದ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...