ಬೆಂಗಳೂರು: ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅನುಷ್ಕಾ ಸಹೋದರ ಗುಣರಂಜನ್ ಶೆಟ್ಟಿ, ತನಗೆ ಕೊಲೆ ಬೆದರಿಕೆ ಬಂದಿರುವುದು ನಿಜ ಎಂದು ತಿಳಿಸಿದ್ದಾರೆ.
ಮನ್ಮಿತ್ ಎಂಬ ವ್ಯಕ್ತಿಯಿಂದ ನನಗೆ ಬೆದರಿಕೆ ಬಂದಿದೆ. ನನ್ನನ್ನು ಹತ್ಯೆ ಮಾಡುವುದಾಗಿ ಮೆಸೇಜ್ ಕಳುಹಿಸಿದ್ದಾನೆ ಎಂದು ಖಾಸಗಿ ಸುದ್ದಿವಾಹಿನಿಗೆ ಗುಣರಂಜನ್ ಶೆಟ್ಟಿ ತಿಳಿಸಿದ್ದಾರೆ.
ಈ ವಿಚಾರವನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಬೆದರಿಕೆ ಕುರಿತಾಗಿ ತನಿಖೆ ನಡೆಸಲಾಗುತ್ತಿದೆ. ಜಾಗೃತಿ ವಹಿಸುವಂತೆ ಪೊಲೀಸರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ದಿ.ಮುತ್ತಪ್ಪ ರೈ ಅವರಿಗೆ ಗುಣರಂಜನ್ ಶೆಟ್ಟಿ ಆಪ್ತರಾಗಿದ್ದರು. ಅಲ್ಲದೇ ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತ ವಲಯದಲ್ಲಿಯೇ ಗುರುತಿಸಿಕೊಂಡಿದ್ದ ಮನ್ಮಿತ್ ರೈ ಎಂಬುವವರು ಗುಣರಂಜನ್ ಶೆಟ್ಟಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ದೂರು ನೀಡಿತ್ತು. ಆದರೆ ಮನ್ಮಿತ್ ರೈ ತನ್ನ ವಿರುದ್ಧದ ಆರೋಪವನ್ನು ತಳ್ಳಿ ಹಾಕಿದ್ದರು. ಆದರೀಗ ತಮಗೆ ಮನ್ಮಿತ್ ಎಂಬ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದ್ದು ನಿಜ ಎಂದು ಗುಣರಂಜನ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.