ಬೆಂಗಳೂರು: ಅತ್ತ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಎಂಬ ವಿಚಾರ ಬಹುತೇಕ ಖಚಿತವಾಗುತ್ತಿದ್ದಂತೆ ಇತ್ತ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ. ಪರಮೇಶ್ವರ್, ನನಗೆ ಡಿಸಿಎಂ ಸ್ಥಾನ ಕೊಡಬೇಕು. ಒಬ್ಬರು ಮಾತ್ರ ಅಧಿಕಾರಲ್ಲಿ ಇರಬೇಕು ಎಂಬುದು ಸೂಕ್ತವಲ್ಲ ಎಂದು ಹೇಳಿದ್ದಾರೆ.
ಎಲ್ಲಾ ಸಮುದಾಯಗಳನ್ನು ಪರಿಗಣಿಸಿ ಉಪಮುಖ್ಯಮಂತ್ರಿ ಸ್ಥಾನ ಕೊಡಲಿ. ನಾನೂ ಕೂಡ ಡಿಸಿಎಂ ಆಗಿದ್ದವನು. ಎಲ್ಲರ ನಾಯಕತ್ವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ನ ಇನ್ನು ಕೆಲ ನಾಯಕರು ಹೈಕಮಾಂಡ್ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರಮುಖ ಸಮುದಾಯಗಳಿಗೆ ಡಿಸಿಎಂ ಹುದ್ದೆ ಕೊಡಬೇಕು ಎಂದು ಪಟ್ಟು ಹಿಡಿಯಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.