alex Certify BIG NEWS: ನನ್ನ ಮಗನ ವಿರುದ್ಧ ಭ್ರಷ್ಟಾಚಾರ ಆರೋಪ HDKಯವರ ಕಲ್ಪನಾ ವಿಲಾಸ; ಇದೇ ವಾದವನ್ನು ಅವರ ಕುಟುಂಬಕ್ಕೆ ಅನ್ವಯಿಸಬಹುದಾ….? ಎಂದು ಟಾಂಗ್ ನೀಡಿದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಮಗನ ವಿರುದ್ಧ ಭ್ರಷ್ಟಾಚಾರ ಆರೋಪ HDKಯವರ ಕಲ್ಪನಾ ವಿಲಾಸ; ಇದೇ ವಾದವನ್ನು ಅವರ ಕುಟುಂಬಕ್ಕೆ ಅನ್ವಯಿಸಬಹುದಾ….? ಎಂದು ಟಾಂಗ್ ನೀಡಿದ ಸಿಎಂ

ಬೆಂಗಳೂರು: ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಗಳು ಹಿಟ್ ಆಂಡ್ ರನ್ ಇದ್ದಂತೆ. ಅವರು ತಾವು ಮಾಡಿದ ಯಾವ ಆರೋಪವನ್ನೂ ಈವರೆಗೆ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಅಧಿಕಾರವಿಲ್ಲದೇ ಹತಾಶರಾಗಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ಈವರೆಗೆ ಮಾಡಿರುವ ಯಾವುದೇ ಆರೋಪವನ್ನು ಅವರು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರಾ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿ ಹೋಗ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತವಿಲ್ಲ ಎಂದು ಹೇಳಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲಿ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್ -ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿವೆ. ಇದು ನಮ್ಮಿಂದ ಶುರುವಾದುದಲ್ಲ. ಹಿಂದಿನ ಸರ್ಕಾರದಲ್ಲೂ ನಡೆದಿದೆ. ಮುಂದೆಯೂ ನಡೆಯುತ್ತದೆ. ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ವರ್ಗಾವಣೆ ನಡೆದಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ? ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಕುಮಾರಸ್ವಾಮಿಯವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...