alex Certify BIG NEWS: ನನ್ನ ಮಗ ಡ್ರಗ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ; ಸಿದ್ಧಾಂತ್ ಕಪೂರ್ ತಂದೆ ಬಾಲಿವುಡ್ ನಟ ಶಕ್ತಿ ಕಪೂರ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಮಗ ಡ್ರಗ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ; ಸಿದ್ಧಾಂತ್ ಕಪೂರ್ ತಂದೆ ಬಾಲಿವುಡ್ ನಟ ಶಕ್ತಿ ಕಪೂರ್ ಹೇಳಿಕೆ

ಬೆಂಗಳೂರು: ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿಬಿದ್ದು, ಬೆಂಗಳೂರು ಪೊಲೀಸರಿಂದ ಬಂಧಿಸಲ್ಪಟ್ಟಿರುವ ಬಾಲಿವುಡ್ ನಟ ಶಕ್ತಿ ಕಪೂರ್ ಮಗ ನಟ ಸಿದ್ಧಾಂತ್ ಕಪೂರ್ ಪರ ಇದೀಗ ತಂದೆ ಸಮಜಾಯಿಷಿ ನೀಡಿದ್ದು, ತನ್ನ ಮಗ ಡ್ರಗ್ಸ್ ಸೇವಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ ನನ್ನ ಮಗ ಸಿದ್ಧಾಂತ್ ಕಪೂರ್ ಡ್ರಗ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ. ಆತ ಪಾರ್ಟಿಯಲ್ಲಿ ಭಾಗಿಯಾಗಿರಬಹುದು. ಆದರೆ ಡ್ರಗ್ಸ್ ಸೇವಿಸಿರಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನ ‘ದಿ ಪಾರ್ಕ್ ಹೋಟೆಲ್’ ಮೇಲೆ ನಿನ್ನೆ ತಡ ರಾತ್ರಿ ದಾಳಿ ನಡೆಸಿದ್ದ ಪೊಲೀಸರು ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟ ಸಿದ್ಧಾಂತ್ ಕಪೂರ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಸಿದ್ಧಾಂತ್ ಕಪೂರ್ ಸೇರಿ 6 ಜನರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, 6 ಜನರನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...