ಬೆಂಗಳೂರು: ನನ್ನ ಮನೆ ಮೇಲೆ ಐಟಿ ದಾಳಿ ನಡೆದಿಲ್ಲ ಎಂದು ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಗುರಪ್ಪನಾಯ್ಡು ಅವರ ಬೆಂಗಳೂರಿನ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಗುರಪ್ಪನಾಯ್ಡು, ನನ್ನ ನಿವಾಸದ ಮೇಲೆ ಐಟಿ ದಾಳಿ ನಡೆದಿಲ್ಲ. ನಾನು ಎಲ್ಲಾ ಟ್ಯಾಕ್ಸ್ ಕಟ್ಟಿದ್ದೇನೆ. ಐಟಿ ದಾಳಿ ನಡೆಯಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ಗುರಪ್ಪನಾಯ್ಡು ಪದ್ಮನಾಭನಗರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಬನಶಂಕರಿಯಲ್ಲಿರುವ ಅವರ ನಿವಾಸದ ಮೇಲೆ ಇಂದು ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಇದನ್ನು ಗುರಪ್ಪನಾಯ್ಡು ನಿರಾಕರಿಸಿದ್ದಾರೆ.