alex Certify BIG NEWS: ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ; ನೀರು ನುಗ್ಗಿರುವ ಮನೆಯ ದೃಶ್ಯ ಹಂಚಿಕೊಂಡ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ; ನೀರು ನುಗ್ಗಿರುವ ಮನೆಯ ದೃಶ್ಯ ಹಂಚಿಕೊಂಡ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್

jaggesh - chitraloka.com | Kannada Movie News, Reviews | Image

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಕಳೆದ ಮೂರು ದಿನಗಳಿಂದ ಗುಡುಗು ಸಹಿತ ಧಾರಾಕಾರ ಮಳೆಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಮನೆ ಕೂಡ ಜಲಾವೃತಗೊಂಡಿದ್ದು, ಕುಟುಂಬ ಸದಸ್ಯರು ತೊಂದರೆಗೆ ಸಿಲುಕಿದ್ದಾರೆ.

ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್, ನನ್ನ ಮನೆಸಂಪೂರ್ಣ ಜಲಾವೃತಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು, ನೀರಾವರಿ ನಿಗಮದವರು ಗಮನ ಹರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿದ್ದಾರೆ.

ತುಮಕೂರಿನ ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತಗೊಂಡಿದೆ…… ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳನ್ನು ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತಿದೆ. ದಯಮಾಡಿ ನೀರಾವರಿ ನಿಗಮ ಗಮನ ಹರಿಸಿ ಎಂದು ವಿನಂತಿಸಿದ್ದಾರೆ.

ಅಲ್ಲದೇ ಈ ಬಗ್ಗೆ ತುಮಕೂರು ಡಿಸಿ, ಜಿಲ್ಲಾ ಪಂಚಾಯತ್, ಕಾವೇರಿ ನಿಗಮ ಎಂಡಿ ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಟ್ಯಾಗ್ ಮಾಡಿ ಟ್ವೀಟರ್ ನಲ್ಲಿ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...