BIG NEWS: ನನ್ನ ವಿರುದ್ಧ ಸ್ಪರ್ಧೆಗೆ ಬೊಮ್ಮಾಯಿ ಮಾತ್ರವಲ್ಲ, ಮೋದಿ ಬೇಕಾದರೂ ಬರಲಿ; ಎಸ್.ಎಸ್. ಮಲ್ಲಿಕಾರ್ಜುನ್ ಸವಾಲು

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪ್ರಚಾರದ ಕಾವು ಜೋರಾಗತೊಡಗಿದ್ದು ಸೋಮವಾರದಂದು ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಪ್ರಚಾರ ಕಾರ್ಯ ನಡೆಸಿದ್ದಾರೆ.

ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ಮತಯಾಚನೆ ನಡೆಸಿದ ತಂದೆ – ಮಗ, ಜನರ ಆಶೀರ್ವಾದ ತಮ್ಮಗಳ ಮೇಲಿದ್ದು, ದಾವಣಗೆರೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರಂತೆ ಎಂದು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಅದಕ್ಕೆ ಉತ್ತರಿಸಿದ ಮಲ್ಲಿಕಾರ್ಜುನ್, ಬೊಮ್ಮಾಯಿ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರು ಬೇಕಾದರೂ ಬರಲಿ ಎಂದು ಸವಾಲು ಹಾಕಿದರು.

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಜನ ರೋಸತ್ತು ಹೋಗಿದ್ದಾರೆ. ಇವರ 40% ಕಮಿಷನ್ ಎಲ್ಲರಿಗೂ ಗೊತ್ತಿದೆ. ಹೀಗಾಗಿ ರಾಜ್ಯದ ಜನ ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read