alex Certify BIG NEWS: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ; ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ; ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದ ಸತೀಶ್ ಜಾರಕಿಹೊಳಿ

ಬೆಳಗಾವಿ: ಹಿಂದೂ ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ತಮ್ಮ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೊನೆಗೂ ವಿಷಾದ ವ್ಯಕ್ತಪಡಿಸಿದ್ದಾರೆ.

ಹಿಂದೂ ಪದ ಅಶ್ಲೀಲ ಎಂದು ಹೇಳಿಕೆ ನೀಡುವ ಮೂಲಕ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಕಾಂಗ್ರೆಸ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿ ಕಾರ್ಯಕರ್ತರು ಜಿಲ್ಲೆ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿ, ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಆದರೂ ಕ್ಷಮೆ ಕೇಳಲ್ಲ, ತಮ್ಮ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಲೇ ಇದ್ದ ಸತೀಶ್ ಜಾರಕಿಹೊಳಿ ಇದೀಗ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಶಾಸಕ ಸತೀಶ್ ಜಾರಕಿಹೊಳಿ, ನನ್ನ ಹೇಳಿಕೆಯಲ್ಲಿ ತಪ್ಪಿದೆಯಾ ಎನ್ನುವ ಬಗ್ಗೆ ಸಮಿತಿ ರಚಿಸಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಅಲ್ಲದೇ ನನ್ನ ತೇಜೋವಧೆಗೆ ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...