alex Certify BIG NEWS: ನಮ್ಮದು ಯಡಿಯೂರಪ್ಪನವರದ್ದು ತಂದೆ-ಮಗನ ಸಂಬಂಧ; ಭಿನ್ನಾಭಿಪ್ರಾಯದ ಸಂದರ್ಭವೇ ಇಲ್ಲ ಎಂದ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಮ್ಮದು ಯಡಿಯೂರಪ್ಪನವರದ್ದು ತಂದೆ-ಮಗನ ಸಂಬಂಧ; ಭಿನ್ನಾಭಿಪ್ರಾಯದ ಸಂದರ್ಭವೇ ಇಲ್ಲ ಎಂದ ಸಿಎಂ

ಕೊಪ್ಪಳ: ಬಿಜೆಪಿ ಮನೆಯೊಂದು ನೂರು ಬಾಗಿಲಾಗಿದೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀದಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಮನೆಗೆ ಬಾಗಿಲು, ಕಿಟಕಿ ಏನಿಲ್ಲ, ಎಲ್ಲಾ ಬಟಾಬಯಲು ಎಂದು ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ನನ್ನ ನಡುವೆ ಭಿನ್ನಾಭಿಪ್ರಾಯವಿದೆ ಎಂಬುದು ಶುದ್ಧ ಸುಳ್ಳು. ನಮ್ಮದು ತಂದೆ ಮಕ್ಕಳ ಸಂಬಂಧ. ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲಿಯೂ ಭಿನ್ನಾಭಿಪ್ರಾಯ ಬರುವುದಿಲ್ಲ. ಭಿನ್ನಾಭಿಪ್ರಾಯ ನಿರೀಕ್ಷೆ ಮಾಡುವವರಿಗೆ ನಿರಾಸೆಯಾಗುತ್ತದೆ ಎಂದರು.

ಬಿ.ಎಸ್.ಯಡಿಯೂರಪ್ಪ ನಮ್ಮ ಸರ್ವೋಚ್ಚ ನಾಯಕರು. ಅವರನ್ನು ಮುಂದಿಟ್ಟುಕೊಂಡೇ ಎಲ್ಲಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಅವರು ಮುನಿಸಿಕೊಂಡಿದ್ದಾರೆ ಎಂಬುದು ಸುಳ್ಳು ಸುದ್ದಿ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...