ಬೆಂಗಳೂರು: ರೌಡಿಶೀಟರ್ ಹಿನ್ನೆಲೆಯುಳ್ಳವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅಂತಹ ಹಿನ್ನೆಲೆಯುಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರೌಡಿಶೀಟರ್ ಹಿನ್ನೆಲೆಯುಳ್ಳವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ,. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಗಳಿಲ್ಲ. ಯಾವುದೇ ಕಾರಣಕ್ಕೂ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂದು ಹೇಳಿದರು.
ರೌಡಿಶೀಟರ್ ಪಟ್ಟಿಯಲ್ಲಿದ್ದ ಸೈಲೆಂಟ್ ಸುನೀಲ್, ಫೈಟರ್ ರವಿ, ಬೆತ್ತನಗೆರೆ ಶಂಕರ್ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಗೆ ಯತ್ನಿಸಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ರೌಡಿ ಹಿನ್ನೆಲೆಯುಳ್ಳವರನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.