ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ತಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಸಕ್ತಿ ಇಲ್ಲ. ಚುನಾವಣೆ ಕಾರಣಕ್ಕಾಗಿ ಭರವಸೆ ಕೊಟ್ಟಿದ್ದರು ಈಗ ಕ್ಯಾಬಿನೆಟ್ ಸಭೆಯಲ್ಲಿ ಏನು ಹೇಳುತ್ತಿದ್ದೀರಿ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರು ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿ ಯೋಜನೆ ಜಾರಿಗೆ ತರುವುದಾಗಿ ಹೇಳಿದ್ದರು. ಈಗ ಮೊದಲ ಸಭೆ ಮುಗಿದಿದೆ ಈಗ ಏನು ಹೇಳುತ್ತಿದ್ದೀರಿ? ಎಂದು ಕೇಳಿದ್ದಾರೆ.
ಕಾಂಗ್ರೆಸ್ ನವರು ಸುಳ್ಳು ಹೇಳುವುದರಲ್ಲಿ ಪ್ರಸಿದ್ದಿ ಪಡೆದಿದ್ದಾರೆ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ತನಿಖೆ ನಡೆಸಲಿ ನಮ್ಮ ಅಭ್ಯಂತರವಿಲ್ಲ, ನಮ್ಮ ಸಮಯದಲ್ಲಿ ಯಾವುದೇ ಹಗರಣಗಳೂ ನಡೆದಿಲ್ಲ ಎಂದು ಹೇಳಿದರು.