ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ವೇಳೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬಿಜೆಪಿಯ ಪ್ರಸಕ್ತ ಪರಿಸ್ಥಿತಿಗೆ ಅವರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಮ್ಮ ಸರ್ಕಾರದವಿದ್ದ ವೇಳೆ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರನ್ನು ರಾಜೀನಾಮೆ ಕೊಡಿಸಿ ಬಿಜೆಪಿಗೆ ಕರೆತರಲಾಯಿತು. ಅವರು ಪಕ್ಷಕ್ಕೆ ಬರುತ್ತಿದ್ದಂತೆ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಯಿತು. ಜೊತೆಗೆ ಕರ್ನಾಟಕ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿಯೂ ನೇಮಿಸಲಾಯಿತು ಎಂದು ಶೆಟ್ಟರ್ ಹೇಳಿದರು.
ಸಭೆಯಲ್ಲಿ ಅಣ್ಣಾಮಲೈ ಅವರಿಗೆ ಕರ್ನಾಟಕ ವಿಧಾನಸಭಾ ಕ್ಷೇತ್ರದ ರಾಜಕೀಯ ಪರಿಸ್ಥಿತಿಯ ಅರಿವೇ ಇರಲಿಲ್ಲ. ಚುನಾವಣಾ ವೀಕ್ಷಕರಾದ ಕಾರಣ ಅವರು ಮುಂದಿನ ಸಾಲಿನಲ್ಲಿ ಕುಳಿತರೆ ನಾವು ಹಿಂದಿನ ಸಾಲಿನಲ್ಲಿ ಕೂರಬೇಕಾಗಿತ್ತು. ಅಣ್ಣಾಮಲೈ ಸಭೆಗಳಲ್ಲಿ ಯಾವುದೇ ಮಾತನಾಡುತ್ತಿರಲಿಲ್ಲ ಅಂತಹ ವ್ಯಕ್ತಿ ಈಗ ಬಿಜೆಪಿಯ ಪ್ರಮುಖ ನಾಯಕ ಎಂದು ವ್ಯಂಗ್ಯವಾಡಿದರು.