ಬೆಂಗಳೂರು: ಶಾಲಾ-ಕಾಲೇಜುಗಳ ಆರಂಭವಾದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಇದೀಗ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ದಾಸರಹಳ್ಳಿಯ ಚಿಕ್ಕಬಾಣವಾರದ ನರ್ಸಿಂಗ್ ಕಾಲೇಜಿನ 16 ವಿದ್ಯಾರ್ಥಿಗಳಲ್ಲಿ ಕೋವಿಡ್ ದೃಢಪಟ್ಟಿದೆ. ಮೊದಲು ಓರ್ವ ವಿದ್ಯಾರ್ಥಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಆ ವಿದ್ಯಾರ್ಥಿಯ ಪ್ರಾಥಮಿಕ ಸಂಪರ್ಕದಲ್ಲಿದ್ದ 11 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕಾಲೇಜಿನ 42 ವಿದ್ಯಾರ್ಥಿಗಳನ್ನು ಟೆಸ್ಟ್ ಮಾಡಿಸಲಾಗಿದೆ.
ಲಾಕ್ ಡೌನ್ ನಡುವೆಯೂ ನಂಜುಂಡೇಶ್ವರ ದೇವಾಲಯದಲ್ಲಿ ಭಾರಿ ಕಾಣಿಕೆ ಸಂಗ್ರಹ
42 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಕಾಲೇಜು ಹಾಸ್ಟೇಲ್ ನ್ನು ಮೈಕ್ರೋ ಕಂಟೈನ್ಮೆಂಟ್ ಝೋನ್ ಎಂದು ಬಿಬಿಎಂಪಿ ಪರಿಗಣಿಸಿದೆ.