ಹಾವೇರಿ: ನವೆಂಬರ್ ತಿಂಗಳೊಳಗೆ ರಾಜ್ಯದ ಎಲ್ಲರಿಗೂ ಕೋವಿಡ್ ಮೊದಲ ಡೋಸ್ ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊರೊನಾ ಮೂರನೇ ಅಲೆ ಆತಂಕ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನವೆಂಬರ್ ತಿಂಗಳೊಳಗೆ ಎಲ್ಲರಿಗೂ ಮೊದಲ ಡೋಸ್ ಲಸಿಕೆ ನೀಡಲಾಗುವುದು. ಶೇ.60ರಷ್ಟು ಜನರಿಗೆ ಎರಡನೇ ಡೋಸ್ ಲಸಿಕೆ ಕೂಡ ನೀಡಲಾಗುವುದು ಎಂದರು.
ಕರೆನ್ಸಿ ರೂಪದಲ್ಲಿ ʼಬಿಟ್ ಕಾಯಿನ್ʼ ಬಳಸಬಹುದಾ….? ಇಲ್ಲಿದೆ ಉಪಯುಕ್ತ ಮಾಹಿತಿ
ಇನ್ನು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕೋವಿಡ್ ಕೇಸ್ ನೋಡಿಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಇನ್ನೆರಡು ದಿನಗಳಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಹೇಳಿದರು.