alex Certify BIG NEWS: ನಾಡಗೀತೆಯನ್ನು ಅವಮಾನ ಮಾಡಿದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಡಗೀತೆಯನ್ನು ಅವಮಾನ ಮಾಡಿದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ನಾಡಗೀತೆಯನ್ನು ಅವಹೇಳನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಾಡಗೀತೆ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅಲ್ಲದೇ ನಾಡಗೀತೆಯನ್ನು ಕಾಂಗ್ರೆಸ್ ನಾಯಕರಿಗೆ ಹೋಲಿಸುವ ರೀತಿಯಲ್ಲಿ ವ್ಯಂಗ್ಯಭರಿತವಾಗಿ ರೋಹಿತ್ ಚಕ್ರತೀರ್ಥ ಬರೆದಿರುವ ಸಾಲುಗಳ ಲಿಂಕ್ ಗಳನ್ನು ಸೇರಿಸಿರುವ ಸಿದ್ದರಾಮಯ್ಯ, ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...