ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಸ್ಥಾಪಿಸಲಾಗುತ್ತಿದ್ದು, ಇದರ ಉದ್ಘಾಟನಾ ಅಭಿಯಾನವನ್ನು ನಾಳೆ ಬೆಳಗ್ಗೆ 9:30ಕ್ಕೆ ನೆರವೇರಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣದ ಭೂಮಿ ಪೂಜೆಯೂ ನೆರವೇರಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ನೆರವೇರಿಸಲಿದ್ದಾರೆ.
ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ್ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್, ಅರೋಗ್ಯ ಸಚಿವ ಸುಧಾಕರ್ ಉಪಸ್ಥಿತರಿರಲಿದ್ದು, ಶಾಸಕ ನಾರಾಯಣ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.