ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದ್ದು, ಅಕ್ಟೋಬರ್ 7ರಂದು ದಸರಾ ಉದ್ಘಾಟನೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 13ರಂದು ವೀರನಹೊಸಹಳ್ಳಿಯಿಂದ ಗಜಪಯಣಕ್ಕೆ ಚಾಲನೆ ನೀಡಲಾಗುವುದು. ಸೆ.16ರಂದು ಅಂಬಾವಿಲಾಸ ಅರಮನೆಗೆ ಗಜಪಡೆ ಆಗಮಿಸಲಿದೆ. ದಸರಾ ಜಂಬೂಸವಾರಿಯಲ್ಲಿ 8 ಆನೆಗಳು ಭಾಗಿಯಾಗಲಿವೆ ಎಂದರು.
ಜಿಯೋ ಗ್ರಾಹಕರಿಗೆ ಬಿಗ್ ಶಾಕ್..! ವೆಬ್ಸೈಟ್ ನಲ್ಲಿ ಕಾಣ್ತಿಲ್ಲ ಅಗ್ಗದ ಎರಡು ಯೋಜನೆ
ಅಕ್ಟೋಬರ್ 7ರಂದು ಮೈಸೂರು ದಸರಾ ಉದ್ಘಾಟನೆ ನಡೆಯಲಿದೆ. ಉದ್ಘಾಟಕರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆಯ್ಕೆ ಮಾಡಲಿದ್ದಾರೆ. 9 ದಿನಗಳ ಕಾಲ ಅರಮನೆ ಒಳಗೆ ಸಾಂಕೃತಿಕ ಕಾರ್ಯಕ್ರಮ ನಡೆಯಲಿದೆ. ಅ.15ರಂದು ಜಂಬೂಸವಾರಿ ನಡೆಯಲಿದೆ.
ಈ ಬಾರಿ ಮೂರು ಸ್ತಬ್ಧಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ ನೀಡಲಾಗಿದೆ. ನಾಡ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿ ದರ್ಶನಕ್ಕೆ ಅವಕಾಶ ಇರಲಿದೆ. ನಗರದ 157 ವೃತ್ತಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ವಿವರಿಸಿದರು.