ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹಂಸಲೇಖ ಅವರಿಗೆ ಎದೆನೋವು ಕಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಂಸಲೇಖ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ ಈ ಹಿಂದೆ ಹಂಸಲೇಖ ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಹಾಗಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ. ಆದರೆ ಹೆದರುವ ಅಗತ್ಯವಿಲ್ಲ. ಯಾವುದೇ ರೀತಿ ಸಮಸ್ಯೆ ಇಲ್ಲ ಎಂದು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.