alex Certify BIG NEWS: ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾದಬ್ರಹ್ಮ ಹಂಸಲೇಖ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಂಸಲೇಖ ಅವರಿಗೆ ಎದೆನೋವು ಕಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ರಾಜಾಜಿನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಂಸಲೇಖ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಂಸಲೇಖ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ಆದರೆ ಈ ಹಿಂದೆ ಹಂಸಲೇಖ ಒಪನ್ ಹಾರ್ಟ್ ಸರ್ಜರಿಗೆ ಒಳಗಾಗಿದ್ದರು. ಹಾಗಾಗಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ. ಆದರೆ ಹೆದರುವ ಅಗತ್ಯವಿಲ್ಲ. ಯಾವುದೇ ರೀತಿ ಸಮಸ್ಯೆ ಇಲ್ಲ ಎಂದು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...