ಬೆಂಗಳೂರು: ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ನಾನು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವನಲ್ಲ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ್ದಾರೆ.
ನಾನಂತು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಲ್ಲ. ಯಾಕೆಂದರೆ ಕೊತ್ವಾಲ್ ತೀರಿಕೊಂಡಾಗ ನಾನು ಪ್ರೈಮರಿ ಓದುತ್ತಿದ್ದೆ. ಕೊತ್ವಾಲ್ ರಾಮಚಂದ್ರನ ಶಿಷ್ಯಂದಿರು ಬೇರೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ತಡರಾತ್ರಿ ಫೋನಿನಲ್ಲಿ ಮಾತನಾಡಿದ್ದಕ್ಕೆ ಪತ್ನಿಗೆ ಗುಂಡಿಕ್ಕಿ ಕೊಂದ ಪತಿ
ಇದೇ ವೇಳೆ ನಾನು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋದವನಲ್ಲ. ಹೋರಾಟ ಮಾಡಿ ಜೈಲಿಗೆ ಹೋದವನು ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ತಿರುಗೇಟು ನೀಡಿದರು.