alex Certify BIG NEWS: ನಾನು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಕಾರಣ; ಅವರೊಬ್ಬ ದೂರದೃಷ್ಟಿಯುಳ್ಳ ನಾಯಕ; BSY ಹಾಡಿ ಹೊಗಳಿದ CM | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಕಾರಣ; ಅವರೊಬ್ಬ ದೂರದೃಷ್ಟಿಯುಳ್ಳ ನಾಯಕ; BSY ಹಾಡಿ ಹೊಗಳಿದ CM

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಬೆಳೆಸಿದ್ದಾರೆ. ನಾನು ಸಿಎಂ ಆಗಲು ಯಡಿಯೂರಪ್ಪನವರೇ ಕಾರಣ ಎಂದು ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಯಡಿಯೂರಪ್ಪನವರು ನನಗೆ ಸಿಕ್ಕಿರುವುದು ನನ್ನ ಪೂರ್ವಜನ್ಮದ ಪುಣ್ಯ. ನಾನು ರಾಜಕೀಯವಾಗಿ ಬೆಳೆಯಲು, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅವರೆ ಕಾರಣ. ಸಿಎಂ ಸ್ಥಾನವನ್ನು ಬಿಟ್ಟಾಗ ಅವರಿಗೆ ಎಲ್ಲಿಯೂ ಕಹಿ ಇರಲಿಲ್ಲ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.

BIG NEWS: 15 ದಿನಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

ಯಡಿಯೂರಪ್ಪ ಓರ್ವ ದೂರದೃಷ್ಟಿಯುಳ್ಳ ನಾಯಕ. ಬಡವರ ಬಗ್ಗೆ ಅಪಾರವಾದ ಕಾಳಜಿ ಹೊಂದಿದವರು. ರಾಜ್ಯದ ಮೂಲೆ ಮೂಲೆಯಲ್ಲಿಯೂ ಬಿ ಎಸ್ ವೈ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನ, ಆಡಳಿತದ ಕಾರ್ಯವೈಖರಿ ಎಲ್ಲರಿಗೂ ಮಾದರಿ ಎಂದು ಶ್ಲಾಘಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...