ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ಯ ನಾಯಕರಲ್ಲಿ ತೀವ್ರ ಪೈಪೋಟಿ ಆರಂಭವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಿರಾಕರಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯ ರೇಸ್ ನಲ್ಲಿದ್ದೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಈ ಪ್ರಶ್ನೆಗೆ ನಾನು ಉತ್ತರಿಸಲ್ಲ. ನಾನು ಯಾವುದೇ ರೇಸ್ ನಲ್ಲಿ ಇಲ್ಲ. ನಾನು ಈಗಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ ಎಂದು ಹೇಳಿದರು.
ಕಾರ್ಯಕರ್ತ ಅನ್ನೋದನ್ನು ಯಾವತ್ತೂ ಯಾರೂ ಕಿತ್ತುಕೊಳ್ಳಲು ಆಗುವುದಿಲ್ಲ. ಪಕ್ಷ ನನಗೆ ಎಕ್ಸ್ ಪಿರೀಯನ್ಸ್, ಎಕ್ಸ್ ಪೋಸ್ ಎರಡಕ್ಕೂ ಅವಕಾಶ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ ಎಂದು ಹೇಳಿದರು.