ರಾಜಸ್ಥಾನದ ಉದಯ್ ಪುರದಲ್ಲಿ ಮುಸ್ಲಿಂ ಮೂಲಭೂತವಾದಿಗಳಿಂದ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾಗಿದ್ದು, ಆ ಬಳಿಕ ರಾಜಸ್ಥಾನದಲ್ಲಿ ಆಕ್ರೋಶ ಭುಗಿಲೆದ್ದಿದೆ. ಕನ್ನಯ್ಯ ಲಾಲ್ ಹತ್ಯೆಯನ್ನು ಖಂಡಿಸಿ ಕರ್ನಾಟಕವೂ ಸೇರಿದಂತೆ ದೇಶದೆಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದು, ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ.
ಧಾರವಾಡದಲ್ಲೂ ಶ್ರೀರಾಮ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ವೇಳೆ ಮಾತನಾಡಿದ ಅವರು ನಾನು ಸಹ ನೂಪೂರ್ ಶರ್ಮಾ ಅವರನ್ನು ಬೆಂಬಲಿಸುತ್ತೇನೆ. ನನ್ನಂತೆಯೇ ದೇಶದ ಕೋಟ್ಯಾಂತರ ಮಂದಿ ಅವರನ್ನು ಬೆಂಬಲಿಸುತ್ತಿದ್ದು, ತಾಕತ್ತಿದ್ದರೆ ಬನ್ನಿ ಎಂದು ಸವಾಲು ಹಾಕಿದ್ದಾರೆ.
ಹಾಡಹಗಲೇ ಮುಸ್ಲಿಂ ಮೂಲಭೂತವಾದಿಗಳಿಂದ ಕನ್ನಯ್ಯ ಲಾಲ್ ಹತ್ಯೆಯಾಗಿದ್ದು, ತನಗೆ ಬಂದ ಬೆದರಿಕೆಗಳ ಕುರಿತು ಆತ ಪೊಲೀಸರಿಗೆ ದೂರು ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದಾಗಿ ಆತ ಬರ್ಬರವಾಗಿ ಹತ್ಯೆಯಾಗುವಂತಾಯಿತು ಎಂದು ಪ್ರತಿಭಟನಾಕಾರರು ರಾಜಸ್ಥಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.