alex Certify BIG NEWS: ನಾನೇನು ಅಂಬರೀಶ್ ಗೆ ಗುಲಾಮನಾ…? ಫೋಟೋ ವೈರಲ್ ಬಗ್ಗೆ ಹೆಚ್.ಡಿ.ಕೆ. ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾನೇನು ಅಂಬರೀಶ್ ಗೆ ಗುಲಾಮನಾ…? ಫೋಟೋ ವೈರಲ್ ಬಗ್ಗೆ ಹೆಚ್.ಡಿ.ಕೆ. ಕಿಡಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ನಟ ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲಲು ನಾನೇನು ಅಂಬರೀಶ್ ಗೆ ಸ್ಲೇವ್ ಆಗಿದ್ದೇನಾ ? ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಅಂಬರೀಶ್ ಇದ್ದಾಗ ಯಾರ್ಯಾರು ಅವರ ಮುಂದೆ ಕೈಕಟ್ಟಿ ನಿಲ್ಲುತ್ತಿದ್ದರು ಎಂಬುದು ಗೊತ್ತು ಎಂಬ ಸುಮಲತಾ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈಕಟ್ಟಿ ನಿಂತಿರುವ ಫೋಟೋಗಳು ವೈರಲ್ ಆಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅಂಬರೀಶ್ ಮುಂದೆ ಕೈಕಟ್ಟಿ ನಿಲ್ಲಲು ನಾವೇನು ಗುಲಾಮರಾ ? ಜನಸಾಮಾನ್ಯರು ಬಂದರೂ ನಾನು ಕೈಕಟ್ಟಿ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

BIG NEWS: ಆದಿಚುಂಚನಗಿರಿ ಮಠಾಧೀಶರ ಫೋನ್ ಕದ್ದಾಲಿಸಿದ್ದಾರೆ; ಸುಮಲತಾ ಗಂಭೀರ ಆರೋಪ

ಈ ವಿಚಾರಗಳನ್ನು ವೈಭವೀಕರಿಸುವ ಅಗತ್ಯವಿಲ್ಲ. ಈ ಮೂಲಕ ಅವರಿಗೆ ಸ್ಕೋಪ್ ಕೊಡಬೇಕಾಗಿಯೂ ಇಲ್ಲ. ಹಲವು ವರ್ಷಗಳಿಂದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಾ ಬಂದವರು ನಾವು. ನಮ್ಮ ಬಗ್ಗೆ ಮಾತಾಡುವ ಯೋಗ್ಯತೆ ಸುಮಲತಾಗಿಲ್ಲ ಎಂದು ಗುಡುಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...