alex Certify BIG NEWS: ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಪತ್ತೆ

ಬೆಂಗಳೂರು: ವಸತಿ ಶಾಲೆಯಿಂದ ಇತ್ತೀಚೆಗೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಬೆಂಗಳೂರಿನ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

ಶರಣ್ ಪಟೇಲ್ ಹಾಗೂ ಶ್ರೇಯಸ್ ಗೌಡ ಪತ್ತೆಯಾಗಿರುವ ವಿದ್ಯಾರ್ಥಿಗಳು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೇಶಹಳ್ಳಿಯ ಪೂರ್ಣಪ್ರಜ್ಞಾ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಈ ಇಬ್ಬರು ವಿದ್ಯಾರ್ಥಿಗಳು ಕೆಲ ದಿನಗಳ ಹಿಂದೆ ಶಾಲೆಯಿಂದ ನಾಪತ್ತೆಯಾಗಿದ್ದರು.

ಶಾಲೆಗೆ ಚಕ್ಕರ್ ಹಾಕಿ ಬೆಂಗಳೂರಿಗೆ ಬಂದಿರುವ ವಿದ್ಯಾರ್ಥಿಗಳು ಇದೀಗ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸರಿಗೆ ಪತ್ತೆಯಾಗಿದ್ದಾರೆ. ವಿಚಾರಣೆ ನಡೆಸಿದಾಗ ಬೆಂಗಳೂರು ನೋಡಲೆಂದು ಬಂದಿದ್ದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಪೋಷಕರಿಗೆ ಒಪ್ಪಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...