alex Certify BIG NEWS: ನಾಮಪತ್ರ ಸಲ್ಲಿಕೆ ವೇಳೆ ಲಾಠಿ ಪ್ರಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಮಪತ್ರ ಸಲ್ಲಿಕೆ ವೇಳೆ ಲಾಠಿ ಪ್ರಹಾರ

ಮೈಸೂರು: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಇಂದು ರಾಜಕೀಯ ಪಕ್ಷಗಳ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಚಿಕ್ಕಮಾದು ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಜಮಾವಣೆಗೊಂಡಿದ್ದರು. ಇದೇ ವೇಳೆ ಜೆಡಿಎಸ್ ಅಭ್ಯರ್ಥಿ ಕೂಡ ನಾಮಪತ್ರ ಸಲ್ಲಿಸಲು ಸಾವಿರಾರು ಕಾರ್ಯಕರ್ತರ ಜೊತೆ ಆಗಮಿಸಿದ್ದಾರೆ. ಈ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ನೂಕು ನುಗ್ಗಲು ಉಂಟಾಗಿದೆ.

ಜನರನ್ನು ಚದುರಿಸಲು ಪೊಲಿಸರು ಲಘು ಲಾಠಿಪ್ರಹಾರ ನಡೆಸಿದ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...