ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಇದೀಗ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16ಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವುದು ಮಹತ್ವ ಪಡೆದುಕೊಂಡಿದೆ.
ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿ ಮಾಡಿದ್ದು, ಇದೀಗ ಎರಡು ದಿನಗಳ ರಾಜ್ಯ ಭೇಟಿಗಾಗಿ ಅರುಣ್ ಸಿಂಗ್ ಆಗಮಿಸುತ್ತಿರುವುದು ಮತ್ತಷ್ಟು ಕುತೂಹಲ ಕೆರಳಿಸಿದೆ.
ಕುತೂಹಲ ಮೂಡಿಸಿದ ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ್ ಮಹತ್ವದ ಚರ್ಚೆ
ಜೂನ್ 16ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಅರುಣ್ ಸಿಂಗ್, ಜೂನ್ 18ರವರೆಗೂ ವಾಸ್ತವ್ಯ ಹೂಡಲಿದ್ದಾರೆ. ಈ ವೇಳೆ ಅಸಮಾಧಾನಿತ ಶಾಸಕರು, ಸಚಿವರು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ತಮ್ಮ ಅಹವಾಲು ಹೇಳಿಕೊಳ್ಳಲು ಅವಕಾಶವಿರುವುದಾಗಿ ರಾಜ್ಯ ಬಿಜೆಪಿ ಸಚಿವ, ಶಾಸಕರಿಗೆ ಸಂದೇಶ ರವಾನಿಸಿದೆ. ಈ ನಿಟ್ಟಿನಲ್ಲಿ ಅರುಣ್ ಸಿಂಗ್ ಭೇಟಿ ಬೆನ್ನಲ್ಲೇ ಮಹತ್ವದ ರಾಜಕೀಯ ವಿದ್ಯಮಾನಕ್ಕೆ ರಾಜ್ಯ ಸಾಕ್ಷಿಯಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.