alex Certify BIG NEWS: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್

ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಆಘಾತಕಾರಿ ಟ್ವಿಸ್ಟ್ ಸಿಕ್ಕಿದ್ದು, ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು, ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಮಂಗಳೂರಿನ ಮಾರ್ಗ್ಸನ್ಸ್ ಸ್ಟ್ರೀಟ್ ನಲ್ಲಿರುವ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಬಾಗಲಕೋಟೆ ಮೂಲದ ನಾಗೇಶ್ ಶಿರಗುಪ್ಪಿ (30), ವಿಜಯಲಕ್ಷ್ಮಿ (26) ಹಾಗೂ ಮಕ್ಕಳಾದ ಸಪ್ನಾ (8), ಸಮರ್ಥ್ (4) ಮೃತರು.

15 ದಿನಗಳ ಹಿಂದಷ್ಟೇ ನಾಗೇಶ್ ಕುಟುಂಬ ಇಲ್ಲಿ ಮನೆ ಬಾಡಿಗೆಗೆ ಬಂದು ವಾಸವಾಗಿದ್ದರು. ನಾಗೇಶ್ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸ್ವತಃ ನಾಗೇಶ್ ಪತ್ನಿ ವಿಜಯಲಕ್ಷ್ಮಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ, ಬಳಿಕ ತಾನು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಅನುಮಾನವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಂಗಳೂರು ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...