ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರು ಹಾಗೂ ಮಕ್ಕಳಿಗೆ ಬಿಗ್ ಶಾಕ್ ನೀಡಿದ್ದು, ನಾಳೆ ಜೂನ್ 15ರಿಂದಲೇ ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ತಿಳಿಸಿದೆ.
ಇನ್ನೇನು ರೈಲು ಡಿಕ್ಕಿ ಹೊಡೆಯಬೇಕೆನ್ನುವಷ್ಟರಲ್ಲಿ ಹಳಿಯಿಂದ ಹಾರಿ ಜೀವ ಉಳಿಸಿಕೊಂಡ ಯುವಕ
ಈ ಕುರಿತು ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ಮಾಹಿತಿ ನೀಡಿದ್ದು, ಜೂನ್ 15ರಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಮಕ್ಕಳ ದಾಖಲಾತಿ ಆರಂಭಿಸಬೇಕು. ಜುಲೈ 30ರೊಳಗೆ ಮಕ್ಕಳ ದಾಖಲಾತಿ ಮುಗಿಸಬೇಕು ಹಾಗೂ ಜುಲೈ 1ರಿಂದ ಶಾಲೆಗಳನ್ನು ತೆರೆಯುವಂತೆ ಎಲ್ಲಾ ಶಾಲೆಗಳಿಗೂ ಸುತ್ತೋಲೆ ಹೊರಡಿಸಲಾಗಿದೆ ಎಂದರು.
ಜನನಿಬಿಡ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ
ಶಿಕ್ಷಕರು ಅನ್ಯಕಾರಣ ನೀಡುವಂತಿಲ್ಲ. ಈಗಾಗಲೇ ಒಂದು ಶೈಕ್ಷಣಿಕ ವರ್ಷ ವಿಳಂಬವಾಗಿದೆ. ಕೋವಿಡ್ ವೇಳೆ ವೈದ್ಯರು, ಕಾರ್ಮಿಕರು ಕೂಡ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಶಿಕ್ಷಕರು ಶಾಲೆಗಳಿಗೆ ಹಾಜರಾಗಬೇಕು. ಒಂದು ವೇಳೆ ಜುಲೈ 1ರಿಂದ ಕೋವಿಡ್ ಸಮಸ್ಯೆಯಾಗಿ ಶಾಲೆಗಳಲ್ಲಿ ತರಗತಿ ಸಾಧ್ಯವಾಗಿಲ್ಲ ಎಂದರೆ ಆನ್ ಲೈನ್ ತರಗತಿಗಳ ಮೂಲಕವಾದರೂ ಪಾಠ ಮಾಡಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.