ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಕ್ಕಳಿಗೂ ಲಸಿಕೆ ನೀಡಿಕೆ ಆರಂಭವಾಗಲಿದೆ. ನಾಳೆಯಿಂದ 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.
ನಾಳೆ ಮೊದಲ ದಿನ ಒಂದು ಶಾಲೆಯ 50 ಮಕ್ಕಳಿಗೆ ಮಾತ್ರ ಲಸಿಕೆ ಹಾಕಿಸಲಾಗುತ್ತದೆ. ನಂತರದ ದಿನಗಳಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಲಸಿಕೆ ಹಾಕಲಾಗುತ್ತದೆ. ಕೋವಿಡ್ ಲಸಿಕೆ ವೇಳೆ ಶಾಲೆಯ ಬಳಿ ಒಂದು ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗುತ್ತಿದೆ.
ಮೊದಲ ಬಾರಿ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುತ್ತಿರುವುದರಿಂದ 30 ನಿಮಿಷ ಕಡ್ಡಾಯವಾಗಿ ಕಾಯುವ ಕೋಣೆಯಲ್ಲಿ ಮಕ್ಕಳು ಇರಲು ಆದ್ಯತೆ ನೀಡಲಾಗುತ್ತಿದೆ. ಅಲ್ಲದೇ ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ಸರ್ಕಾರ ನಿರ್ಧರಿಸಿದ್ದು, ಮಕ್ಕಳಲ್ಲಿ ಸುಸ್ತು, ಕೈನೋವು, ಜ್ವರ ಕಾಣಿಸಿಕೊಂಡರೆ ರಜೆ ಪಡೆಯಬಹುದಾಗಿದೆ.