ಬೆಂಗಳೂರು: ಕೊರೊನಾ ಆತಂಕದ ನಡುವೆಯೇ ರಾಜ್ಯದಲ್ಲಿ ನಾಳೆಯಿಂದ 6-8ನೇ ತರಗತಿ ಶಾಲೆಗಳು ಆರಂಭವಾಗಲಿವೆ. ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ಶಾಲೆಗಳು ಆರಂಭವಾಗುತ್ತಿವೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ನಾಳೆಯಿಂದ 6-8ನೇ ತರಗತಿ ಶಾಲೆಗಳು ಆರಂಭವಾಗುತ್ತಿದ್ದು, ಎಲ್ಲಾ ರೀತಿಯ ಮುಂಜಾಗೃತಾ ಕ್ರಮ ಕೈಗೊಳ್ಳಲು ಡಿಡಿಪಿಐ, ಬಿಇಓ ಗಳಿಗೆ ಸೂಚಿಸಲಾಗಿದೆ ಎಂದರು.
ರೈತರ ಮಕ್ಕಳಿಗೆ ಸರ್ಕಾರದಿಂದ ವಿಶೇಷ ಕೊಡುಗೆ: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಸಿಎಂ ಚಾಲನೆ
ವಾರದಲ್ಲಿ 5 ದಿನಗಳು ಮಾತ್ರ ತರಗತಿಗಳು ನಡೆಯಲಿದ್ದು, ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮಾತ್ರ ಭೌತಿಕ ತರಗತಿಗಳು ನಡೆಯಲಿವೆ. ಕೋವಿಡ್ ಸುರಕ್ಷತಾ ಕ್ರಮಗಳನ್ನು ಕೈಗೊಂಡು ವಿದ್ಯಾರ್ಥಿಗಳು ಶಾಲೆಗೆ ಬರಬೇಕು. ಊಟದ ಬಾಕ್ಸ್, ಬಿಸಿ ನೀರು ವಿದ್ಯಾರ್ಥಿಗಳು ತೆಗೆದುಕೊಂಡು ಬರಬೇಕು. ಅಗತ್ಯವಿದ್ದರೆ ಶಾಲೆಗಳಲ್ಲಿ ಕೂಡ ಬಿಸಿ ನೀರಿನ ವ್ಯವಸ್ಥೆಗೆ ಸೂಚಿಸಲಾಗಿದೆ ಎಂದರು.