ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಾಳೆಯಿಂದ ರಾಜ್ಯಾದ್ಯಂತ ಕೆ ಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಡಿಪೋಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಕೋಕಾಕೋಲಾ ಮೀಮ್ ಬಳಸಿ ಕೋವಿಡ್-19 ಲಸಿಕೆ ಜಾಗೃತಿ ಮೂಡಿಸಿದ ಉ.ಪ್ರ. ಪೊಲೀಸ್
ನಾಳೆ ಬೆಳಿಗ್ಗೆ 6 ಗಂಟೆಯಿಂದ ಬಸ್ ಸಂಚಾರ ಆರಂಭವಾಗಲಿದೆ. ಚಾಲಕರು ಹಾಗೂ ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕು. ಅಲ್ಲದೇ ಕೊರೊನಾ ಲಸಿಕೆ ಮೊದಲ ಅಥವಾ ಎರಡನೇ ಡೋಸ್ ಪಡೆದಿರಬೇಕು. ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದು, ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿದೆ ಎಂದು ಸಾರಿಗೆ ಇಲಾಖೆ ಸೂಚಿಸಿದೆ.
ಎರಡನೇ ಮದುವೆಯಾದ ಮಹಿಳೆಯಿಂದ ದುಡುಕಿನ ನಿರ್ಧಾರ
ನಾಳೆಯಿಂದ ಅನ್ ಲಾಕ್ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕೆಎಸ್ಆರ‍್ ಟಿಸಿ ಬಸ್ ಡಿಪೋಗಳಲ್ಲಿ ಬಸ್ ಗಳನ್ನು ಪಿಪಿಇ ಕಿಟ್ ಧರಿಸಿ ತೊಳೆದು ಸ್ವಚ್ಚಗೊಳಿಸಲಾಗಿದ್ದು, ಬಸ್ ಒಳಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ. ಒಟ್ಟಾರೆ ಬಸ್ ಸಂಚಾರಕ್ಕೆ ಭರದ ಸಿದ್ಧತೆ ನಡೆದಿದೆ.