ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.
ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಈಗಾಗಲೇ ಮೊದಲ ಪಟ್ಟಿಯಲ್ಲಿ ಟಿಕೆಟ್ ಪಡೆದಿರುವ 124 ಅಭ್ಯರ್ಥಿಗಳನ್ನು ಸಭೆಗೆ ಆಹ್ವಾನಿಸಲಾಗಿದ್ದು, ಚುನಾವಣಾ ರಣತಂತ್ರದ ಬಗ್ಗೆ ಚರ್ಚೆ ನಡೆಯಲಿದೆ.
ಇದೇ ವೇಳೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ವಿಚರವಾಗಿಯೂ ಚರ್ಚೆ ನಡೆಯಲಿದ್ದು, ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಯಲಿದೆ. ಶೀಘ್ರದಲ್ಲಿಯೇ ಎರಡನೇ ಪಟ್ಟಿ ಬಿಡುಗಡೆಗೂ ಕೈ ನಾಯಕರು ಸಿದ್ದತೆ ನಡೆಸಿದ್ದಾರೆ.