alex Certify BIG NEWS: ನಾಳೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಗ್ಗೆ ಮಹತ್ವದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಾಳೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ; ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, 2ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದೆ.

ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಈಗಾಗಲೇ ಮೊದಲ ಪಟ್ಟಿಯಲ್ಲಿ ಟಿಕೆಟ್ ಪಡೆದಿರುವ 124 ಅಭ್ಯರ್ಥಿಗಳನ್ನು ಸಭೆಗೆ ಆಹ್ವಾನಿಸಲಾಗಿದ್ದು, ಚುನಾವಣಾ ರಣತಂತ್ರದ ಬಗ್ಗೆ ಚರ್ಚೆ ನಡೆಯಲಿದೆ.

ಇದೇ ವೇಳೆ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ವಿಚರವಾಗಿಯೂ ಚರ್ಚೆ ನಡೆಯಲಿದ್ದು, ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಸಮಾಲೋಚನೆ ನಡೆಯಲಿದೆ. ಶೀಘ್ರದಲ್ಲಿಯೇ ಎರಡನೇ ಪಟ್ಟಿ ಬಿಡುಗಡೆಗೂ ಕೈ ನಾಯಕರು ಸಿದ್ದತೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...